ವಿಜಯಪುರ: ಬಬಲೇಶ್ವರ ಮತಕ್ಷೇತ್ರದಲ್ಲಿ ಅಭಿವೃದ್ಧಿ ವರ್ಸ್ಸ್ ಗೂಂಡಾಗಿರಿ ಮಧ್ಯೆ ಸ್ಪರ್ಧೆ ಇದೆ ಎಂದು ಕಾಂಗ್ರೆಸ್ ಮುಖಂಡ ಸಂಗಮೇಶ ಬಬಲೇಶ್ವರ ಹೇಳಿದರು. ವಿಜಯಪುರ ನಗರದಲ್ಲಿ ಗುರುವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಬಲೇಶ್ವರ ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೀಲ ಗುಂಡಾಗಿರಿ ಮಾಡುತ್ತಿದ್ದಾರೆ. ಅಲ್ಲದೇ, ಜನರಿಗೆ ಕರೆ ಮಾಡಿ ಬೆದರಿಸಿ ಮತ ಕೇಳುತ್ತಿದ್ದಾರೆ ಎಂದು ಆರೋಪಿಸಿದರು. ಬಿಜೆಪಿ ಟಿಕೆಟ್ ಘೋಷಣೆ ಆಗುತ್ತಿದಂತೆ ಗುಂಡು ಹಾರಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ವಿಜ್ಜುಗೌಡಾ ಪಾಟೀಲ ಪುತ್ರ ಸಮರ್ಥ ಪಾಟೀಲ ಗಾಳಿಯಲ್ಲಿ ಎರಡು ಗುಂಡು ಹಾರಿಸಿದ್ದಾರೆ. ಅದಕ್ಕಾಗಿ ಜನತೆ ತಕ್ಕಪಾಠ ಕಲಿಸಬೇಕು ಎಂದು ಒತ್ತಾಯಿಸಿದರು.