ವಿಜಯಪುರ: ವ್ಯಕ್ತಿಯೋರ್ವ ರೈಲ್ವೆಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ನಗರದ ಇಬ್ರಾಹಿಮಪುರ ರೈಲ್ವೆ ಗೇಟ್ ಬಳಿ ಶನಿವಾರ ನಡೆದಿದೆ.
ಗುರುರಾಜ ಪುರೋಹಿತ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಇನ್ನೂ ಗುರುರಾಜ್ ಜೀವನದಲ್ಲಿ ಜಿಗುಪ್ಸೆಗೊಂಡು ಮುಂಬೈ ಗದಗ ಮಾರ್ಗ ಮಧ್ಯೆ ಸಂಚರಿಸುವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ರೈಲ್ವೆ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.