ವಿಜಯಪುರ: ದಾಖಲೆ ಇಲ್ಲದೇ ನಗದು ಸಾಗಿಸುತ್ತಿದ್ದ ಕಾರಿನಲ್ಲಿ 54.49 ಲಕ್ಷ ನಗದು ವಶಪಡಿಸಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಝಳಕಿ ಚೆಕ್ ಪೋಸ್ಟ್ನಲ್ಲಿ ರವಿವಾರ ನಡೆದಿದೆ. ಝಳಕಿ ಚೆಕ್ ಪೋಸ್ಟ್ನಲ್ಲಿ ವಾಹನಗಳ ತಪಾಸಣೆ ವೇಳೆ ಕಾರಿನಲ್ಲಿ 54,49 ಲಕ್ಷ ನಗದು ಪತ್ತೆಯಾಗಿದೆ. ಕಾರಿನಲ್ಲಿ ಮೂರು ಜನ ಪ್ರಯಾಣಿಸುತ್ತಿದ್ದರು. ಅವರನ್ನು ವಿಚಾರಣೆ ನಡೆಸಲಾಗಿ ಅವರು ಬೆಂಗಳೂರಿನಿಂದ ಮಹಾರಾಷ್ಟ್ರ ರಾಜ್ಯದ ಸೋಲಾಪುರಕ್ಕೆ ತೆರಳುತ್ತಿದ್ದರು ಎನ್ಜುವ ಮಾಹಿತಿ ಲಭ್ಯವಾಗಿದೆ. ಆದರೆ ಆ ಹಣ ಯಾವ ಉದ್ದೇಶಕ್ಕೆ ತೆಗೆದುಕೊಂಡು ಹೋಗುತ್ತಿದ್ದರು. ಅವರ ಹೆಸರು ವಿಳಾಸ ಪತ್ತೆಯಾಗಿಲ್ಲ. ಝಳಕಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.