ವಿಜಯಪುರ: ವೈಯಕ್ತಿಕ ದ್ವೇಷ ಹಿನ್ನೆಲೆ ಯುವಕನ ಮೇಲೆ ಚಾಕುವಿನಿಂದ ಮಾರಣಾಂತಿಕ ಹಲ್ಲೆಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹೊರ್ತಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಪುತ್ರೇಶ ಬೆಳ್ಳೆನವರ ಹಲ್ಲೆಗೊಳಗಾದ ಯುವಕ. ರಾಹುಲ್ ಎಂಬಾತನಿಂದ ಚಾಕುವಿನಿಂದ ಹಲ್ಲೆಗೈದಿರುವ ಆರೋಪಿ. ಇನ್ನೂ ವೈಯಕ್ತಿಕ ದ್ವೇಷ ಹಿನ್ನೆಲೆ ಹಲ್ಲೆ ಮಾಡಲಾಗಿದೆ. ಹಲ್ಲೆಗೊಳಗಾದ ಪುತ್ರೇಶ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೊರ್ತಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.