ವಿಜಯಪುರ: ವಿಧಾನಸಭಾ ಚುನಾವಣೆಯಲ್ಲಿ ನಮ್ಮಿಂದ ತಪ್ಪು ಆಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು. ವಿಜಯಪುರದ ಅಲಿಯಾಬಾದ್ನಲ್ಲಿ ಮಂಗಳವಾರ ಮಾಧ್ಯಮದ ಎದುರು ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ 70 ಟಿಕೆಟ್ ಹೊಸಬರಿಗೆ ನೀಡಲಾಗಿತ್ತು. ಇದರಿಂದ ಬಿಜೆಪಿಗೆ ಸೋಲಾಗಿದೆ ಎಂದು ಪರೋಕ್ಷವಾಗಿ ಬಿಜೆಪಿ ಪಕ್ಷದ ವಿರುದ್ಧ ಅಸಮಾಧಾನ ಹೊರಹಾಕಿದರು. ಅದಕ್ಕಾಗಿ ಹೊಸಬರಿಗೆ ಟಿಕೆಟ್ ನೀಡಿದವರನ್ನು ನೇಣಿಗೆ ಹಾಕ್ರಿ, ಇಲ್ವೆ ಕಾಲಾದ್ರೂ ತೆಗೆದು ಹಾಕಿ ಎಂದು ವಾಗ್ದಾಳಿ ನಡೆಸಿದರು. ಅಲ್ಲದೇ, ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬರಲು ಕಾಂಗ್ರೆಸ್ ಗ್ಯಾರಂಟಿಗಳೇ ಕಾರಣ. ಗ್ಯಾರಂಟಿಗಳಿಂದ ಕಾಂಗ್ರೆಸ್ಗೆ ಬಹುಮತ ಸಿಕ್ಕಿದೆ ಎಂದರು.