ವಿಜಯಪುರ: ಕುಡಿಯುವ ನೀರಿಗಾಗಿ ಆಗ್ರಹಿಸಿ ಮಹಿಳೆಯರು ಖಾಲಿ ಕೊಡಗಳನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸಿರುವ ಘಟನೆ ವಿಜಯಪುರದ ಸ್ಟೇಟ್ ಬ್ಯಾಂಕ್ ಕಾಲೋನಿಯಲ್ಲಿ ನಡೆದಿದೆ.
ಇನ್ನು ಕಳೆದ ೧೫ ದಿನಗಳಿಂದ ಕುಡಿಯುವ ನೀರು ಬರದೇ ಸ್ಥಳೀಯರು ಹನಿ ನೀರಿಗಾಗಿ ಹಾಹಾಕಾರ ಆರಂಭವಾಗಿದೆ. ಅಲ್ಲದೇ, 15 ದಿನಕ್ಕೊಮ್ಮೆ ಬಿಡುವ ನೀರು ಕೂಡ ಕೊಳಚೆ ನೀರು ಬರುತ್ತಿದೆ. ಇದರಿಂದ ಸಾಂಕ್ರಾಮಿಕ ರೋಗಗಳು ಉಲ್ಬಣವಾಗುವ ಸಂಭವ ಇದೆ ಎಂದು ಮಹಾನಗರ ಪಾಲಿಕೆ ಹಾಗೂ ವಾಟರ್ ಬೋರ್ಡ್ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇನ್ನು ತಕ್ಷಣವೇ ನೀರಿನ ಸಮಸ್ಯೆಯನ್ನು ನಾಗಠಾಣ ಶಾಸಕ ದೇವಾನಂದ್ ಚವ್ಹಾಣ ಪರಿಹಾರ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.