ವಿಜಯಪುರ: ರಾಜಕೀಯ ಪರಿಸ್ಥಿತಿಯಲ್ಲಿ ಲಾಟರಿ ಟಿಕೆಟ್ ಹೊಡೆದು ಮಾಜಿ ಸಿಎಂ ಕುಮಾರಸ್ವಾಮಿ ಸಿಎಂ ಆಗಿದ್ದು ಎಂದು ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ಜಿಲ್ಲಾ ಘಟಕದ ಸಂಚಾಲಕ ಡಾ. ಬಾಬು ರಾಜೇಂದ್ರ ನಾಯಕ ಹೇಳಿದರು.
ವಿಜಯಪುರ ನಗರದಲ್ಲಿ ಶುಕ್ರವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ವಿಷ ಬೀಜ ಬಿತ್ತುವ ಕೆಲಸ ಮಾಡಬಾರದು. ಒಂದು ಸಮಾಜವನ್ನು ಗುರಿಯಾಗಿಟ್ಟುಕೊಂಡು ಮಾತನಾಡುವುದು ಖಂಡನೀಯ ಎಂದು ಎಚ್ಡಿಕೆ ವಿರುದ್ಧ ವಾಗ್ದಾಳಿ ನಡೆಸಿದರು. ಮತ್ತೆ ಸಿಎಂ ಆಗುವ ಕನಸು ಕುಮಾರಸ್ವಾಮಿ ಕಾಣ ಬಾರದು. ಈ ಸಲ ಮತ್ತೇ ಬಿಜೆಪಿ ಸರ್ಕಾರ ಆಡಳಿತಕ್ಕೆ ಬರುತ್ತದೆ. ಅದಕ್ಕಾಗಿ ನಾಲಿಗೆ ಹರಿ ಬಿಡುವ ಕೆಲಸ ಮಾಡಬಾರದು ಎಂದು ಎಚ್ಚರಿಕೆ ನೀಡಿದರು.