ವಿಜಯಪುರ: ವ್ಯಕ್ತಿಯೋರ್ವ ರಸ್ತೆಯಲ್ಲಿ ಬೈಕ್ ನಿಲ್ಲಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ತಾಲ್ಲೂಕಿನ ಹಿಟ್ನಳ್ಳಿ ಫಾರ್ಮ್ ಹೌಸ್ ಬಳಿ ನಡೆದಿದೆ.
ಇನ್ನು ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿಯ ಹೆಸರು ಹಾಗೂ ಮಾಹಿತಿ ಲಭ್ಯವಾಗಿಲ್ಲ. ಅಲ್ಲದೇ, ರಸ್ತೆಯ ಬದಿಯಲ್ಲಿ ಕೆಎ 28 ಎಸ್ 5966 ಬೈಕ್ನ್ನು ನಿಲ್ಲಿಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.