ವಿಜಯಪುರ: ರೈಲ್ವೆ ಹಳಿಯಲ್ಲಿ ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ನಗರದ ಇಬ್ರಾಹಿಮಪುರ ರೈಲ್ವೆ ಗೇಟ್ನಲ್ಲಿ ಸೋಮವಾರ ನಡೆದಿದೆ. ಸುಮಾರು 43 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದ್ರೇ, ವ್ಯಕ್ತಿ ಹೆಸರು ಹಾಗೂ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಅಲ್ಲದೇ, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ವಿಜಯಪುರ ರೈಲ್ವೆ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
![](https://karnataka1news.com/wp-content/uploads/2023/09/IMG_20230925_165456-782x1024.jpg)