ವಿಜಯಪುರ: ಮಹಾನಗರ ಪಾಲಿಕೆ ಚುನಾವಣೆ ರಂಗೇರಿದೆ. ಜೆಡಿಎಸ್ ಪಕ್ಷದಿಂದ ಈ ಬಾರಿ ಚುನಾವಣೆಯಲ್ಲಿ ಭಾರಿ ಪ್ರಮಾಣದಲ್ಲಿ ಅಭ್ಯರ್ಥಿಗಳು ಮತ್ತು ಜೆಡಿಎಸ್ ಪಕ್ಷದ ಮಹಿಳೆಯರು ಚುನಾವಣೆಯಲ್ಲಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸುತ್ತಿದ್ದಾರೆ.
ಚುನಾವಣಾ ಪ್ರಚಾರಕ್ಕೆ ಜೆಡಿಎಸ್ ಪಕ್ಷದ ವಕ್ತಾರರಾದ ಮತ್ತು ಮಹಿಳಾ ಅಧ್ಯಕ್ಷೆ ಸ್ನೇಹಲತಾ ಶೆಟ್ಟಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದರು.
ವಾರ್ಡ್ನಲ್ಲಿ ಹಲವಾರು ಸಮಸ್ಯೆಗಳಿವೆ. ಪರಿಹರಿಸುವ ಜವಾಬ್ದಾರಿ ನಮ್ಮ ಪಕ್ಷದ ಮೇಲಿದೆ ಇದೆ. ಪಕ್ಷದ ಗೆಲುವಿಗೆ ಜೆಡಿಎಸ್ ಅಭ್ಯರ್ಥಿಗಳಿಗೆ ಮತ ನೀಡಿ ಎಂದು ಮನವಿ ಮಾಡಿದರು.
ತೆನೆ ಅಭ್ಯರ್ಥಿ ಸಾಹಿರಾಬಾನು ರಫೀಕ ಆಲಮೇಲ ಮಾತನಾಡಿ, ವಾರ್ಡನ ಎಲ್ಲ ಸಮಸ್ಯೆಗಳಿಗೆ ಪರಿಹರಿಸಲು ನಮ್ಮನ್ನು ಸಹಕರಿಸಿ ಎಂದು ಎಲ್ಲ ಜನತೆಗೆ ವಿನಂತಿಸಿದರು.