ವಿಜಯಪುರ: ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಂದಕ್ಕೆ ಉರುಳಿ ಬಿದ್ದಿರುವ ಘಟನೆ ವಿಜಯಪುರ ನಗರದ ಬಬಲೇಶ್ವರ ರಸ್ತೆಯಲ್ಲಿ ಮಂಗಳವಾರ ನಡೆದಿದೆ.
ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆತನ ಹೆಸರು ಹಾಗೂ ಮಾಹಿತಿ ಲಭ್ಯವಾಗಿಲ್ಲ. ಅಲ್ಲದೇ, ರಸ್ತೆ ಅಪಘಾತದಲ್ಲಿ ಕಾರ ಸಂಪೂರ್ಣವಾಗಿ ಜಖಂಗೊಂಡಿದೆ. ಇನ್ನೂ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.