ವಿಜಯಪುರ: ಬೈಕ್ ಹಾಗೂ ಕ್ಯಾಂಟರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಗಂಡ ಹೆಂಡತಿ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರ ನಗರದ ಹೊರವಲಯದಲ್ಲಿ ಮಂಗಳವಾರ ನಡೆದಿದೆ. ಇನ್ನೂ ಮೃತಪಟ್ಟಿರುವ ಗಂಡ ಹೆಂಡತಿ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ಅಲ್ಲದೇ, ಅಪಘಾತಕ್ಕೆ ಕ್ಯಾಂಟರ್ ವಾಹನ ಚಾಲಕನ ಅತೀ ವೇಗವೆ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.