ತುಮಕೂರು: ನಿಂತಿದ್ದ ಕ್ರೂಸರ್ ಕಾರಿಗೆ ಲಾರಿ ಡಿಕ್ಕಿಯಾಗಿರುವ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರಿನ ಕೋರಾ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಮೃತರು ಗಂಗಾವತಿ ಮೂಲದ ಕ್ರೂಸರ್ ಚಾಲಕ ಶಂಕರ್ (35), ಖಾಸಗಿ ಪಡಿತರ ವಿತರಣಾ ಕೇಂದ್ರದ ಮಾಲೀಕ ಸತೀಶ್ (40) ಮಾಹಿತಿ ಲಭ್ಯವಾಗಿದೆ. ಅಪಘಾತದಲ್ಲಿ ಇನ್ನೊರ್ವನಿಗೆ ಸಣ್ಣಪುಟ್ಟ ಗಾಯ, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಂಗಾವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದರು. ಈ ವೇಳೆ ಕೋರ ಸಮೀಪ ಕ್ರೂಸರ್ ಕಾರಿನ ಹಿಂಬದಿಯ ಟೈಯರ್ ಪಂಚ್ಚರ್ ಆಗಿತ್ತು. ಹೀಗಾಗಿ ಹೆದ್ದಾರಿ ಬದಿಯಲ್ಲಿ ಕಾರ್ ನಿಲ್ಲಿಸಿ ಟೈಯರ್ ಬದಲಿಸುತ್ತಿದ್ದ ವೇಳೆ ಅಪಘಾತ ಆಗಿದೆ. ಅಪಘಾತಕ್ಕೆ ಕಾರಣನಾದ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಮೃತದೇಹಗಳು ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಕೋರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.