ವಿಜಯಪುರ: ವಿವಾಹಿತೆ ಮಹಿಳೆ ಲೈವ್ ಸೊಸೈಡ್ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದಲ್ಲಿ ನಡೆದಿದೆ. ನೇಣಿಗೆ ಶರಣಾಗುವ ಮುನ್ನ ಮೊಬೈಲ್ ವಿಡಿಯೋ ಆನ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸುಹಾನ್ ಸೋನಾರ್ (21) ಆತ್ಮಹತ್ಯೆಗೆ ಶರಣಾದ ವಿವಾಹಿತೆ ಮಹಿಳೆ. ಪ್ರಿಯಕರನ ಬ್ಲ್ಯಾಕ್ಮೇಲ್ ಗೆ ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನನ್ನೊಂದಿಗಿರುವ ಫೋಟೋ ನಿನ್ನ ಗಂಡನಿಗೆ ತೋರಿಸುತ್ತೇನೆ ಎಂದು ಪ್ರಿಯಕರ ಅಲ್ತಾಫ್ ಸುಲೆಮಾನ್ ಬ್ಲ್ಯಾಕ್ಮೇಲ್ ಮಾಡಿದ್ದಾನೆ. ಅದಕ್ಕಾಗಿ ಮರ್ಯಾದೆಗೆ ಹೆದರಿ ಸುಹಾನಾ ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಅಲ್ಲದೇ, ಮೂವರು ಹೆಸರು ಹೇಳಿ ಆತ್ಮಹತ್ಯೆಗೆ ಸುಹಾನಾ ಸೂಸೈಡ್ ಮಾಡಿಕೊಂಡಿದ್ದಾಳೆ.
ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೃಹಿಣಿ ಲೈವ್ ಸೂಸೈಡ್
![](https://karnataka1news.com/wp-content/uploads/2023/04/IMG_20230426_111208-860x956.jpg)