ವಿಜಯಪುರ: ಅನುಮಾಸ್ಪದ ರೀತಿಯಲ್ಲಿ ಗೃಹಿಣಿಯ ಶವವೊಂದು ಮನೆಯಲ್ಲಿ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ರೇವಪ್ಪ ಮಡ್ಡಿನಲ್ಲಿ ನಡೆದಿದೆ.
23 ವರ್ಷದ ಸಾವಿತ್ರಿ ಸಂತೋಷ ನಾವಿ ಮೃತಪಟ್ಟಿರುವ ದುರ್ದೈವಿ. ಇನ್ನೂ ಸಾವಿತ್ರಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಪೊಲೀಸ ತನಿಖೆಯ ಬಳಿಕ ತಿಳಿದು ಬರಬೇಕಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಂಡಿ ಶಹರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.