ಬೆಂಗಳೂರು:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಲ್ಲಿ ನಿವೇಶನ ಹಂಚಿಕೆ ಸಂಬಂಧ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದ್ದು, ತನಿಖೆಗೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಲತಾ ಆದೇಶಿಸಿದ್ದಾರೆ.
ಇತ್ತಿಚ್ಚಿಗೆ ಅಷ್ಟೇ ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ಬಾರಿ ಪ್ರಮಾಣದ ಅಕ್ರಮ ನಡೆದಿದೆ ಎಂದು ವಿರೋಧ ಪಕ್ಷದವರು ಆರೋಪ ಮಾಡಿದ್ದಾಗ ಆ ಖಾತೆಯ ಸಚಿವರನ್ನು ಸರ್ಕಾರ ವಜ ಮಾಡಿಕೊಂಡಿತ್ತು,ಆದರೆ ಅದು ಇನ್ನೂ ತನಿಖೆ ಪ್ರಗತಿಯಲ್ಲಿ ಇರುವಾಗಲೇ ಮತ್ತೆ ಈಗ ಇನ್ನೊಂದು ಪ್ರಾಧಿಕಾರದಲ್ಲಿ ಬಾರಿ ಪ್ರಮಾಣದಲ್ಲಿ ಅಕ್ರಮ ನಡೆದಿದೆ ಎನ್ನಲಾಗಿದ್ದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಪ್ರಕರಣವನ್ನು ತನಿಖೆಗೆ ರಾಜ್ಯ ಸರ್ಕಾರ ಆದೇಶ ನೀಡಿದೆ.
ಹಿರಿಯ ಐಎ ಎಸ್ ಅಧಿಕಾರಿಗಳ ತಂಡ ರಚನೆ ಮಾಡಿರುವ ಸರ್ಕಾರ 15 ದಿನದಲ್ಲಿ ಸಂರ್ಪೂಣ ತನಿಖಾ ವರದಿ ನೀಡಲು ಸೂಚನೆ ನೀಡಿದೆ.