ವಿಜಯಪುರ: ಮನೆಯಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟಿದ್ದ ವೇಳೆ ಅಬಕಾರಿ ಪೊಲೀಸರು ದಾಳಿಗೈದು ಮದ್ಯ ಜಪ್ತಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಅಗರಖೇಡ ಗ್ರಾಮದಲ್ಲಿ ನಡೆದಿದೆ. ಶ್ರೀಮಂತ ಮಾನೆ ಬಂಧಿತ ಆರೋಪಿ. ಆರೋಪಿಯಿಂದ 43.2 ಲೀಟರ್ ಮದ್ಯ ಹಾಗೂ 70.2 ಲೀಟರ್ ಬಿಯರ್ ವಶಕ್ಕೆ ತೆಗೆದುಕೊಂಡಿದ್ದಾರೆ. ಮನೆಯಲ್ಲಿ ಮದ್ಯ ಸಂಗ್ರಹಿಸಿದ ಖಚಿತ ಮಾಹಿತಿ ಆಧರಿಸಿ ಅಬಕಾರಿ ಪೊಲೀಸರು ದಾಳಿಗೈದಿದ್ದಾರೆ. ಈ ಕುರಿತು ಇಂಡಿ ಅಬಕಾರಿ ವಲಯ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.