ವಿಜಯಪುರ: ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ವೇಳೆಯಲ್ಲಿ ಅಬಕಾರಿ ಪೊಲೀಸರು ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ರೂಗಿ-ಅಥರ್ಗಾ ಮಾರ್ಗದ ಪೀರಾಪುರ ದರ್ಗಾ ಹತ್ತಿರ ನಡೆದಿದೆ.
ಅಬಕಾರಿ ಪೊಲೀಸರು ದಾಳಿಗೈದು 40 ಸಾವಿರ ಮೌಲ್ಯದ 950 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ. ಆರೋಪಿ ಸೋಮನಿಂಗ ಅಣ್ಣಪ್ಪ ಗುಡಿನ್ನು ಪೊಲೀಸರು ಬಂಧಿಸಿದ್ದಾರೆ. ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆದಿದೆ. ವಿಜಯಪುರ ಅಬಕಾರಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.