ವಿಜಯಪುರ: ವಿಜಯಪುರ ಜಿಲ್ಪಾಸ್ಪತ್ರೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಿಜೇರಿಯನ್ ಮೂಲಕ ಹೆರಿಗೆಯಾದ ಬಾಣಂತಿಯರ ನರಳಾಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ, ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ 48 ಗಂಟೆಯಲ್ಲಿ ವರದಿ ಸಲ್ಲಿಸಲು ಸೂಚಿಸಿದ್ದಾರೆ.
ಬಳಿಕ ಬಾಣಂತಿಯರ ಹಾಗೂ ಪೋಷಕರ ಬಳಿ ಮಾಹಿತಿ ಪಡೆದು ಆಸ್ಪತ್ರೆಯ ವೈದ್ಯರೊಂದಿಗೆ ಚರ್ಚೆ ನಡೆಸಿದ ನಂತರ ಘಟನೆ ಕುರಿತು ತನಿಖೆ ನಡೆಸಬೇಕೆಂದು ಆದೇಶಿಸಿದ್ದಾರೆ.
ವಿಜಯಪುರ ಉಪವಿಭಾಗಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ, ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯಾಧಿಕಾರಿ ಸದಸ್ಯರನ್ನೊಳಗೊಂಡ ತನಿಖಾ ತಂಡ 48 ಗಂಟೆಯೊಳಗೆ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚಿಸಿದ್ದಾರೆ.