ಹುಬ್ಬಳ್ಳಿ: ಮಾರ್ಚ್ 6 ರಂದು ಬೆಳಿಗ್ಗೆ 10.30 ಕ್ಕೆ ಹುಬ್ಬಳ್ಳಿಯ ಗೋಕುಲ ರೋಡ್ ನಲ್ಲಿ ನೂತನವಾಗಿ ನಿರ್ಮಿಸಿರುವ ಕರ್ನಾಟಕ ರಾಜ್ಯ ಪೊಲೀಸ್ ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯದ ಉದ್ಘಾಟನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸುವರು.
ಕೇಂದ್ರ ಸಂಸದೀಯ ವ್ಯವಹಾರಗಳು ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ ಜೋಶಿ ಘನ ಉಪಸ್ಥಿತಿ ವಹಿಸಿವರು. ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಗೃಹಸಚಿವ ಅರಗ ಜ್ಞಾನೇಂದ್ರ, ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆಚಾರ.ಹಾಲಪ್ಪ.ಬಸಪ್ಪ, ಕೈಮಗ್ಗ ಮತ್ತು ಜವಳಿ ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವ ಶಂಕರ. ಬ.ಪಾಟೀಲ್ ಮುನೇನಕೂಪ್ಷ ಗೌರವ ಅಥಿತಿಗಳಾಗಿ ಭಾಗವಹಿಸುವರು.ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಅಧ್ಯಕ್ಷತೆ ವಹಿಸಿವರು. ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಸಚಿವರು, ಶಾಸಕರು ಬಾಗವಹಿಸುವರು ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸುವರು.