ವಿಜಯಪುರ:
ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ರಾಣಿ ಚನ್ನಮ್ಮ ಮೂರ್ತಿ ಸಮೀಪ ರಾಷ್ಟ್ರಧ್ವಜ ಹರಿದಿರುವುದು ಸಾರ್ವಜನಿಕರ ಗಮನಕ್ಕೆ ಬಂದಿದೆ.
ರಾಷ್ಟ್ರಧ್ವಜದ ಬಟ್ಟೆ ಹರಿದಿರುವ ಸ್ಥಿತಿಯಲ್ಲಿ ಕಂಡುಬಂದಿದ್ದು, ಇದರಿಂದ ಸಾರ್ವಜನಿಕರಲ್ಲಿ ಅಸಮಾಧಾನ ವ್ಯಕ್ತವಾಗಿದೆ.

ರಾಷ್ಟ್ರಧ್ವಜಕ್ಕೆ ಸೂಕ್ತ ಗೌರವ ಹಾಗೂ ಸಂರಕ್ಷಣೆ ನೀಡಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.
ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ, ಹರಿದಿರುವ ರಾಷ್ಟ್ರಧ್ವಜವನ್ನು ಗೌರವಯುತವಾಗಿ ಬದಲಾಯಿಸಿ, ಮುಂದಿನ ದಿನಗಳಲ್ಲಿ ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ರಾಷ್ಟ್ರಧ್ವಜಕ್ಕೆ ಗೌರವ ನೀಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ.





