ಹುಬ್ಬಳ್ಳಿ: ರಾಜ್ಯದಲ್ಲಿ ಚುನಾವಣಾ ಕಾವು ಏರುತ್ತಿದೆ. ಇದರ ಮಧ್ಯೆ ಐಟಿ ಅಧಿಕಾರಿಗಳು ಪಿಲ್ಡಿಗೆ ಇಳಿದಿದ್ದಾರೆ. ವಾಣಿಜ್ಯನಗರಿ ಹುಬ್ಬಳ್ಳಿಗೆ ಐಟಿ ಅಧಿಕಾರಿಗಳು ಲಗ್ಗೆ ಇಟ್ಟಿದ್ದು, ಬಿಲ್ಡರ್ಸ್ ಗಳಿಗೆ ಶಾಕ್ ಕೊಟ್ಟಿದ್ದಾರೆ. ಅಂಕಿತಾ ಬಿಲ್ಡರ್ಸ್ ಮನೆ ಹಾಗೂ ಕಚೇರಿ ಮೇಲೆ ಐಟಿ ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯ ನಿಲೀಜನ ರಸ್ತೆಯಲ್ಲಿರುವ ಕಚೇರಿ ಹಾಗೂ ಮಂಜುನಾಥ್ ನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದು, ಅಂಕಿತಾ ಡೆವಲಪರ್ಸ್ ನ ಮಾಲೀಕ ನಾರಾಯಣ ಬಿ. ಆಚಾರ್ಯ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇನ್ನೂ ಏಕಕಾಲಕ್ಕೆ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು, ಮನೆಯಲ್ಲಿ ಅಧಿಕಾರಿಗಳು ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.