ವಿಜಯಪುರ: ಜಂಬಗಿ ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆ ಎಂಟು ಗ್ರಾಮ ಪಂಚಾಯತಿ ಸದಸ್ಯರ ಕಿಡ್ನ್ಯಾಪ್ಗೈದಿರುವ ಘಟನೆ ವಿಜಯಪುರ ತಾಲ್ಲೂಕಿನ ಜಂಬಗಿ ಗ್ರಾಮದಲ್ಲಿ ನಡೆದಿದೆ. 18 ಸದಸ್ಯರು ಇರುವ ಜಂಬಗಿ ಗ್ರಾಮ ಪಂಚಾಯತಿ ಸದಸ್ಯರಲ್ಲಿ ಎಂಟು ಜನ ಕಿಡ್ನ್ಯಾಪ್ ಮಾಡಲಾಗಿದೆ. ಬಿಜೆಪಿ ಪಕ್ಷದ ಕೈವಾಡ ಇದೆ ಎಂದು ಹಲ್ಲೆಗೊಳಗಾದವರು ಆರೋಪಿಸಿದರು. ಇನ್ನು ನಾಲ್ಕು ಜನರಿಗೆ ಹಲ್ಲೆಗೈದು ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದವರು ವಿಜಯಪುರ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಆಗಿದ್ದಾರೆ.
![](https://karnataka1news.com/wp-content/uploads/2023/08/IMG_20230804_123532-1024x574.jpg)
ಅಲ್ಲದೇ, ಜಂಬಗಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಸದಸ್ಯರ ಕಿಡ್ನ್ಯಾಪ್ ಮಾಡಿರುವುದನ್ನು ಖಂಡಿಸಿ ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಜಂಬಗಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಇನ್ನು ಅಭಿವೃದ್ಧಿಗೆ ಆದ್ಯತೆ ನೀಡದ ಕೆಲವು ಸದಸ್ಯರು ಇಂತಹ ಕೃತ್ಯಕ್ಕೆ ಕೈ ಹಾಕಿದ್ದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, ಕಿಡ್ನ್ಯಾಪ್ ಪ್ರಕರಣದಲ್ಲಿ ಭಾಗಿಯಾಗಿರುವ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.