ವಿಜಯಪುರ: ಗಂಡ ಹೆಂಡತಿ ಒಟ್ಟಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಎಪಿಎಂಸಿ ಪಕ್ಕದಲ್ಲಿ ನಡೆದಿದೆ.
ದೃಶ್ಯ ಮಾಧ್ಯಮದ ಯುವ ಪತ್ರಕರ್ತ ತಿಪ್ಪಣ್ಣ ಹೊಸಮನಿ (34) ಮತ್ತು ಆತನ ಪತ್ನಿ ಸುಜಾತಾ (30) ಅಕ್ಕಪಕ್ಕದ ಕೋಣೆಗಳಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೂ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.