ವಿಜಯಪುರ: ಖಾಸಗಿ ವಾಹನಕ್ಕೆ ಹಿಂಬದಿಯಿಂದ ಆಟೋ ಡಿಕ್ಕಿಯಾಗಿರುವ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ನಡೆದಿದೆ.
ವಿಜಯಪುರ ನಗರದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳಗಳ ಹೆಸರು ಹಾಗೂ ಮಾಹಿತಿ ಲಭ್ಯವಾಗಿಲ್ಲ. ವಿಜಯಪುರದಿಂದ ಕೊಲ್ಹಾರ ಬಳಿಯ ಮೀನು ಹಿಡಿಯಲು ಹೋಗುತ್ತಿದ್ದಾಗ ಖಾಸಗಿ ವಾಹನಕ್ಕೆ ಆಟೋ ಡಿಕ್ಕಿಯಾಗಿದೆ. ಗಾಯಾಳು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೊಲ್ಹಾರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.