ವಿಜಯಪುರ: ಸರ್ಕಾರಿ ಬಸ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಓರ್ವ ಬೈಕ್ ಸವಾರ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇಬಾಡಿ ತಾಲೂಕಿನ ಉತ್ನಾಳ ಕ್ರಾಸ್ ಬಳಿ ರವಿವಾರ ನಡೆದಿದೆ. 31 ವರ್ಷದ ಲಾಲು ಪವಾರ ಮೃತಪಟ್ಟಿರುವ ದುರ್ದೈವಿ. ಇನ್ನೂ ಮತ್ತೋರ್ವ ನೀಲಕಂಠ ಬಾಗೇವಾಡಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮನಗೂಳಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
![](https://karnataka1news.com/wp-content/uploads/2023/05/IMG-20230521-WA0066.jpg)