ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿರುವ ಘಟನೆ ವಿಜಯಪುರ ನಗರದ ಹೊರವಲಯದಲ್ಲಿ ನಡೆದಿದೆ.
ಅಪಘಾತಕ್ಕೆ ಅತೀ ವೇಗವೆ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಘಟನೆಯಲ್ಲಿ ಚಾಲಕ ಹಾಗೂ ಕ್ಲೀನರ್ಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೆಎ 16 ಡಿ 3004 ನಂಬರಿನ ಲಾರಿ ಪಲ್ಟಿಯಾಗಿದೆ. ಆದ್ರೇ, ಪ್ರಾಣ ಹಾನಿಯಾಗಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.