ವಿಜಯಪುರ: ಚಲಿಸುತ್ತಿದ್ದ ಬಸ್ ಸ್ಟೇರಿಂಗ್ ಕಟ್ ಆಗಿರುವ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಗಣಿಹಾರ ಸಿಂದಗಿ ಮಾರ್ಗದಲ್ಲಿ ಶನಿವಾರ ನಡೆದಿದೆ.
ಇನ್ನು ಬಸ್ನಲ್ಲಿದ್ದ 43 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆದ್ರೇ, ಯಾವುದೇ ಪ್ರಾಣ ಹಾನಿಯಾಗಿಲ್ಲ. ಅಲ್ಲದೇ, ಚಾಲಕನ, ಕಂಡಕ್ಟರ್ಗೂ ಏನು ಆಗಿಲ್ಲ. ಅಲ್ಲದೇ, ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.