ವಿಜಯಪುರ: ವಿಧಾನಸಭಾ ಚುನಾವಣೆ ಆಗಮಿಸುತ್ತಿದ್ದಂತೆ ಟಿಕೆಟ್ ಪೈಟ್ ಆರಂಭವಾಗಿದೆ. ಕಾಂಗ್ರೆಸ್ ಟಿಕೆಟ್ಗಾಗಿ ನೂರಾರು ಆಕಾಂಕ್ಷಿಗಳು ಬರುತ್ತಿದ್ದಾರೆ.
ಅದೇ ತರಹ ವಿಜಯಪುರ ನಗರ ಮತಕ್ಷೇತ್ರದ ಕಾಂಗ್ರೆಸ್ ಟಿಕೆಟ್ಗಾಗಿ 100 ಆಕಾಂಕ್ಷಿಗಳಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಅಬ್ದುಲ್ ಹಮ್ಮಿದ್ ಮುಶ್ರಿಫ್ ಹೊಸ ಬಾಂಬ್ ಸಿಡಿಸಿದರು. ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ವಿಜಯಪುರ ನಗರದ ಟಿಕೆಟ್ ಆಕಾಂಕ್ಷಿಗಳ ಲಿಸ್ಟ್ ದೊಡ್ಡದು ಇದೆ. ಅದೇ ತರಹ 100 ಆಕಾಂಕ್ಷಿಗಳು ಟಿಕೆಟ್ ಕೇಳುತ್ತಿದ್ದಾರೆ. ಆದ್ರೇ, ನನಗೆ ಟಿಕೆಟ್ ಸಿಗುತ್ತದೆ. ನಾನು ವಿಜಯಪುರ ನಗರ ಮತಕ್ಷೇತ್ರದ ಅಭ್ಯರ್ಥಿ ಆಗುತ್ತೇನೆ ಎಂದರು.