ವಿಜಯಪುರ: ಬರುವ 2023ರ ವಿಧಾನ ಸಭೆ ಚುನಾವಣೆ ಮುಂದಿಟ್ಟುಕೊಂಡು ನಡೆಯುತ್ತಿರುವ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅತ್ಯಂತ ಹೆಚ್ಚಿನ ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ವಿಜಯಪುರದಲ್ಲಿ ಗುರುವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ ಹೇಳಿದರು.
ಇನ್ನು 35 ವಾರ್ಡ್ ಗಳ ಪೈಕಿ 33 ವಾರ್ಡ್ ಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. ಎಲ್ಲ ಸಮುದಾಯಗಳಿಗೆ ಆದ್ಯತೆ ನೀಡಲಾಗಿದ್ದು, ಒಮ್ಮತದಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಎಲ್ಲ ಸ್ಥಾನಗಳಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.