ವಿಜಯಪುರ: ವಿಜಯಪುರ ಜಿಲ್ಲೆಯ ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕರನ್ನಾಗಿ ವಿಜಯ ಜೋಶಿಯನ್ನು ನೇಮಕ ಮಾಡಲಾಗಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ್ ಆದೇಶಿಸಿದ್ದಾರೆ. ಜೋಶಿ ಅವರಿಗೆ ಬಿಜೆಪಿ ಪಕ್ಷ ನೀಡಿರುವ ಜವಾಬ್ದಾರಿಗಳನ್ನು ಯಶಸ್ವಿಯಾಗಿ ಕಾರ್ಯನಿರ್ವಹಿಸುವ ಮೂಲಕ ಪಕ್ಷದ ಸಂಘಟನೆಯಲ್ಲಿ ಕ್ರಿಯಾತ್ಮಕ ಕೊಡುಗೆ ನೀಡಿದ್ದಾರೆ. ಅದಕ್ಕಾಗಿ ಇನ್ನಷ್ಟು ಹೆಚ್ಚಿನ ಕೆಲಸ ಮಾಡಲಿ ಎಂದು ಕೂಚಬಾಳ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.