ವಿಜಯಪುರ: ವಿಧಾನ ಸಭೆ ಚುನಾವಣೆ ಹಿನ್ನಲೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ ಹೇಳಿದರು.
ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್ 27 ರಂದು ಶಿವಗಿರಿ ಬಳಿ ಜಾಲಹಳ್ಳಿ ಮಠ, ಮತ್ತು ಬಸವನಬಾಗೇವಾಡಿ ಪಟ್ಟಣದ ತಾಳಿಕೋಟೆ ರಸ್ತೆಯ ಪಂಚಾಕ್ಷರಿ ಮಠದಲ್ಲಿ ಕಾರ್ಯಕ್ರಮ ನಡೆಯಲಿದೆ. ಇದಕ್ಕೂ ಮುನ್ನ ಕಟೀಲ ಅವರು ವಿಜಯಪುರದ ಸಿದ್ದೇಶ್ವರ ಶ್ರೀಗಳ ದರ್ಶನ ಪಡೆಯಲಿದ್ದಾರೆ. ಇನ್ನೂ ಎಸ್ಟಿ ಸಮುದಾಯದೊಂದಿಗೆ ಸಮಾಲೋಚನೆ ನಡೆಸುವವರು ಎಂದರು.
ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಹಿನ್ನಲೆ ಸ್ವದೇಶ ವಸ್ತುಗಳ ಬಳಕೆ ಕುರಿತು ಜನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇನ್ನೂ
ದ್ರಾಕ್ಷಿ ಬೆಳೆಗಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಭೀಮಾ ಫಸಲ ಯೋಜನೆಯಡಿ ಕನಿಷ್ಠ 3 ರಿಂದ ಗರಿಷ್ಠ 27 ಲಕ್ಷ ವರೆಗೆ ಹಣ ಜಮೆ ಆಗಿದೆ. ಜಿಲ್ಲೆಯ ರೈತರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ ಎಂದು ಕೂಚಬಾಳ ತಿಳಿಸಿದರು.