ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ರಾಜ್ಯ ಸ್ಥಾನಮಾನ ಮರುಸ್ಥಾಪಿಸಲು ಹೋರಾಟ ಮಾಡುತ್ತೇವೆ. ನನಗೆ 83 ವರ್ಷ, ನಾನು ಅಷ್ಟು ಬೇಗ ಸಾಯುವುದಿಲ್ಲ. ಪ್ರಧಾನಿ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ನಾನು ಜೀವಂತವಾಗಿರುತ್ತೇನೆ ಎಂದು ಹೇಳಿದರು. ಅಲ್ಲದೆ ಭಾಷಣದ ವೇಳೆ ಖರ್ಗೆ ಅಸ್ವಸ್ಥರಾಗಿ ವೇದಿಗೆ ಮೇಲೆ ಕುಸಿದು ಬಿದ್ದರು.
ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕುಸಿದು ಬಿದ್ದ ಘಟನೆ ನಡೆದಿದೆ. ಕೂಡಲೇ ಅವರನ್ನು ಸ್ಥಳಿಯ ಆಸ್ಪತ್ರೆಗೆ ಕರೆದೊಯ್ಯುವ ವ್ಯವಸ್ಥೆ ಮಾಡಲಾಗಿದೆ.