ಕಲಬುರಗಿ: ಹಾಡುಹಗಲೇ ಗ್ರಾಮ ಪಂಚಾಯತಿ ಅಧ್ಯಕ್ಷನ ಕೊಚ್ಚಿ ಬರ್ಬರ ಹತ್ಯೆಗೈದಿರುವ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಚೌಡಾಪೂರದಲ್ಲಿ ನಡೆದಿದೆ. ಮದರಾ ( ಬಿ) ಗ್ರಾಮ ಪಂಚಾಯತಿ ಅಧ್ಯಕ್ಷ ಗೌಡಪ್ಪಗೌಡ ಪಾಟೀಲ್ (50) ಹತ್ಯೆಯಾದ ಅಧ್ಯಕ್ಷ. ಹಳೆ ವೈಷಮ್ಯದ ಹಿನ್ನಲೆಯಲ್ಲಿ ತಲವಾರ್ನಿಂದ ಕೊಚ್ಚಿ ತಲೆ ಮೇಲೆ ಕಲ್ಲು ಎತ್ತು ಹಾಕಿ ಭೀಕರ ಹತ್ಯೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದೇವಲಗಾಣಗಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಭೀಮಾತೀರದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷನ ಹತ್ಯೆ
![](https://karnataka1news.com/wp-content/uploads/2023/10/IMG_20231013_154031.jpg)