K1N ಡೆಸ್ಕ್: ಟೀಂ ಇಂಡಿಯಾದ ಮಾಜಿ ನಾಯಕ, ರನ್ ಮಷಿನ್ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ-20ಯಲ್ಲಿ 4,000 ರನ್ ಗಳನ್ನು ಪೂರೈಸಿದ್ದಾರೆ. ಈ ಸಾಧನೆ ಮಾಡಿದ ಮೊದಲ ಕ್ರಿಕೆಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆಸ್ಟ್ರೇಲಿಯಾದ ಅಡಿಲೇಡ್ನಲ್ಲಿ ಇಂಗ್ಲೆಂಡ್ ವಿರುದ್ಧದ ಟಿ20 ವಿಶ್ವಕಪ್ 2022 ಸೆಮಿಫೈನಲ್ ಪಂದ್ಯದಲ್ಲಿ ಕೊಹ್ಲಿ ಈ ಸಾಧನೆ ಮಾಡಿದರು.
ಅಡಿಲೇಡ್ ಮೈದಾನದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಟಿ20 ವಿಶ್ವಕಪ್ನ ಎರಡನೇ ಸೆಮಿಫೈನಲ್ ಪಂದ್ಯ ನಡೆಯಿತು. ಅದೇ ಸಮಯದಲ್ಲಿ, ವಿರಾಟ್ ಕೊಹ್ಲಿ T20I ನಲ್ಲಿ 4,000 ರನ್ ಗಡಿಯನ್ನು ಮುಟ್ಟಿದ ವಿಶ್ವದ ಮೊದಲ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಕೊಹ್ಲಿ T20 ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ್ದಾರೆ. ಅವರು ಪಾಲ್ ಸ್ಟಿರ್ಲಿಂಗ್, ಮಾರ್ಟಿನ್ ಗಪ್ಟಿಲ್, ಬಾಬರ್ ಆಜಂ, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಗಿಂತ ಮುಂದಿದ್ದಾರೆ. ಸದ್ಯಕ್ಕೆ, ಕೊಹ್ಲಿ 50ಕ್ಕಿಂತ ಹೆಚ್ಚಿನ ಸರಾಸರಿಯಲ್ಲಿ ಸುಮಾರು 140 ಸ್ಟ್ರೈಕ್ ರೇಟ್ ಹೊಂದಿದ್ದಾರೆ.