ವಿಜಯಪುರ: ಲಿಂಬೆ ಉತ್ಸವ ಹಾಗೂ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಲಿಂಬೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಶೋಕ ಅಲ್ಲಾಪುರ ಹೇಳಿದರು.
ನಗರದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್ 23, 24ರಂದು ನಗರದ ಕಂದಗಲ್ ಹಣಮಂತರಾಯ್ ರಂಗಮಂದಿರದಲ್ಲಿ ಲಿಂಬೆ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಲ್ಲದೇ, ಕಾರ್ಯಕ್ರಮವನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟನೆ ಮಾಡಲಿದ್ದಾರೆ. ಇನ್ನು ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಸೇರಿದಂತೆ ಗಣ್ಯರು ಭಾಗಿಯಾಗಿದ್ದಾರೆ. ಅದಕ್ಕಾಗಿ ಸ್ಥಳೀಯ ಜನತೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.