ವಿಜಯಪುರ: ಹಳಿಯಾಳದ ಆರ್ಸೆಟ್ ಕೆನರಾ ಬ್ಯಾಂಕ್ ದೇಶಪಾಂಡೆ ಸಂಸ್ಥೆಯಲ್ಲಿ ಟಾಟಾ ಮೋಟರ್ಸ್ ಧಾರವಾಡ ಇವರ ಸಹಯೋಗದಲ್ಲಿ 20 ರಿಂದ 45 ವಯಸ್ಸಿನ ನಿರುದ್ಯೋಗಿ ಯುವಕರಿಗಾಗಿ 30 ದಿನಗಳ ಲಘು ವಾಹನಾ ಚಾಲನಾ ತರಬೇತಿ ಹಮ್ಮಿಕೊಳ್ಳಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಯುವಕರು ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ, ಪ್ರಸ್ತುತ ಕಾರ್ಯ ಮಾಡುತ್ತಿರುವ ವಿವರ ಒಳಗೊಂಡ ಅರ್ಜಿಯನ್ನು ದಿನಾಂಕ : 30-05-2023ರೊಳಗೆ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ವಿಸ್ತರಣಾ ಕೇಂದ್ರ ಹಸನಮಾಳ, ದಾಂಡೇಲಿ-581325 ವಿಳಾಸಕ್ಕೆ ಸಲ್ಲಿಸಬೇಕು. ತರಬೇತಿ ಊಟೊಪಚಾರ ಹಾಗೂ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ದೂ:08284-298547, ಮೊ: 9449782425 ಸಂಖ್ಯೆಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.