ವಿಜಯಪುರ: ಜಿಲ್ಲೆಯಾದ್ಯಂತ ಆಚರಿಸಲಾಗುವ ಹೋಳಿ ಹಬ್ಬದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಮಾರ್ಚ್ 7 ರ ಬೆಳಿಗ್ಗೆ 6 ಗಂಟೆಯಿಂದ ಮಾರ್ಚ್ 8ರ ಮಧ್ಯರಾತ್ರಿ 12 ಗಂಟೆವರೆಗೆ ಹಾಗೂ ಮಾರ್ಚ್ 12ರ ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ಮಹಾಂತೇಶ ದಾನಮ್ಮನವರ ಆದೇಶ ಹೊರಡಿಸಿದ್ದಾರೆ.