ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಹಿನ್ನಲೆ ಎರಡು ದಿನ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಆದೇಶ ಹೊರಡಿಸಿದ್ದಾರೆ.
ಚುನಾವಣೆಯು ಶಾಂತಿಯುತವಾಗಿ ಜರುಗಿಸುವ ಹಿತದೃಷ್ಟಿಯಿಂದ ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಕ್ಟೋಬರ್ 26ರ ಸಂಜೆ 5 ಗಂಟೆಯಿಂದ ಅಕ್ಟೋಬರ್ 28ರ ಮಧ್ಯರಾತ್ರಿ 12 ಗಂಟೆಯವರೆಗೆ ಎಲ್ಲ ತರಹದ ಮದ್ಯ ಮಾರಾಟ, ಸಂಗ್ರಹಣೆ, ಶೇಖರಣೆ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.