ವಿಜಯಪುರ: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಲೋಕಾಯುಕ್ತ ಎಸ್ಪಿ ಅನಿತಾ ಹದಣ್ಣನವರ ಖಡಕ್ ಎಚ್ಚರಿಕೆ ನೀಡಿದರು.
ವಿಜಯಪುರ ನಗರದ ಬಡಿಕಮಾನ್ ಸೇರಿದಂತೆ ವಿವಿಧ ಕಾಲೋನಿಯಲ್ಲಿ ಲೋಕಾಯುಕ್ತ ಎಸ್ಪಿ ಅನಿತಾ ಹದಣ್ಣನವರ ಸೋಮವಾರ ಸಿಟಿ ರೌಂಡ್ ನಡೆಸಿ, ಪರಿಶೀಲನೆ ನಡೆಸಿದರು.
ವಿಜಯಪುರ ನಗರದ ವಿವಿಧ ವಾರ್ಡ್ಗಳಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಸೇರಿದಂತೆ ಅಧಿಕಾರಗಳು ಸಿಬ್ಬಂದಿಗೆ ಕುಡಿಯುವ ನೀರಿನ ಸಮಸ್ಯೆ, ಚರಂಡಿ, ಸ್ವಚ್ಛತೆಗೆ ಆದ್ಯತೆ ನೀಡುವಂತೆ ಸೂಚನೆ ನೀಡಿದರು. ಅಲ್ಲದೇ, ಜಿಲ್ಲೆಯಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಕಸ ನಿರ್ವಹಣೆ ಕುರಿತು ಜನರು ಕೂಡ ಜಾಗೃತರಾಗಬೇಕು ಎಂದರು.