ಧಾರವಾಡ: ಬಹು ನಿರೀಕ್ಷಿತ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮೇಯರ್, ಉಪ ಮೇಯರ್ ಚುನಾವಣೆ ಬಿಜೆಪಿ ಪಾಲಾಗಿದೆ. ಇಂದು ನಡೆದ ಚುನಾವಣೆಯಲ್ಲಿ ಮೇಯರ್ ಆಗಿ ಬಿಜೆಪಿಯ ವೀಣಾ ಬಾರದ್ವಾಡ್ ಆಯ್ಕೆಯಾದರು. ಬಿಜೆಪಿಯ ವೀಣಾ ಬಾರದ್ವಾಡ್ ಪರ 46 ಮತ ಚಲಾವಣೆಗೊಂಡಿದ್ದು, ಕಾಂಗ್ರೆಸ್ ಪಕ್ಷದ ಸುವರ್ಣ ಪರ 37 ಮತ ಚಲಾವಣೆಗೊಂಡಿವೆ. ಇನ್ನು ಬಿಜೆಪಿಯ ಸತೀಶ ಹಾನಗಲ್ 46 ಮತ ಪಡೆದು ಉಪ ಮೇಯರ್ ಆಗಿ ಆಯ್ಕೆಗೊಂಡಿದ್ದಾರೆ. ಇದರೊಂದಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಬಿಜೆಪಿ ಸಂಪೂರ್ಣ ಯಶಸ್ವಿಯಾಗಿದೆ.
![](https://karnataka1news.com/wp-content/uploads/2023/06/IMG-20230620-WA0018.jpg)