ವಿಜಯಪುರ: ಲಾಡ್ಜ್ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ನಗರದ ಆದರ್ಶ ಲಾಡ್ಜ್ನಲ್ಲಿ ನಡೆದಿದೆ. ಜಮಖಂಡಿ ಮೂಲದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದ್ರೇ, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಕಳೆದ ಮೂರು ದಿನಗಳ ಹಿಂದೇ ಆತ್ಮಹತ್ಯೆಗೆ ಶರಣಾಗಿದ್ದನು. ಇನ್ನೂ ದೇಹದಿಂದ ವಾಸನೆ ಹಿನ್ನಲೆ ಲಾಡ್ಜ್ ರೂಮ್ನ ಲಾಕ್ ಓಪನ್ ಮಾಡಿದಾಗ ಆತ್ಮಹತ್ಯೆ ಬೆಳಕಿಗೆ ಬಂದಿದೆ. ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.