ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಹಿನ್ನಲೆ ಮಂಗಳವಾರ ನಾಮಪತ್ರಗಳ ಪರಿಶೀಲನೆ ಕಾರ್ಯ ಮುಕ್ತಾಯ ಆಗಿದೆ.
35 ಸದಸ್ಯ ಬಲದ ಮಹಾನಗರ ಪಾಲಿಕೆಗೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಹಾಗೂ ಇತರ ಪಕ್ಷಗಳು, ಪಕ್ಷೇತರರು ಸೇರಿದಂತೆ ಒಟ್ಟು 358 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಇದರಲ್ಲಿ
235 ನಾಮಪತ್ರಗಳು ಕ್ರಮಬದ್ಧ ಆಗಿದ್ದು, 119 ನಾಮಪತ್ರಗಳು ತಿರಸ್ಕಾರ ಆಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಮಾಹಿತಿ ನೀಡಿದ್ದಾರೆ.
ಅಕ್ಟೋಬರ್ 20 ರಂದು ನಾಮಪತ್ರಗಳ ಹಿಂಪಡೆಯಲು ಕೊನೆಯ ದಿನ ಆಗಿದೆ. ಅಕ್ಟೋಬರ್ 28 ರಂದು ಮತದಾನ ನಡೆಯಲಿದೆ. ಅಕ್ಟೋಬರ್ 31 ರಂದು ಮತಗಳ ಎಣಿಕೆ ಹಾಗೂ ಫಲಿತಾಂಶ ಪ್ರಕಟ ಆಗಲಿದೆ.