ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಗೆ ಮತದಾನ ಶುಕ್ರವಾರ ಆರಂಭವಾಗಿದೆ. ಇನ್ನು ಬೆಳಗ್ಗೆಯಿಂದ ಸಂಜೆ 5ರ ವರೆಗೆ ಮತದಾನ ನಡೆಯಲಿದೆ.
ವಿಜಯಪುರ ಮಹಾನಗರ ಪಾಲಿಕೆಯ ಒಟ್ಟು 35 ವಾರ್ಡ್ ಗಳಿಗೆ ಚುನಾವಣೆ ನಡೆಯುತ್ತಿದೆ. ಮತದಾರರು ಮತದಾನ ಕೇಂದ್ರಕ್ಕೆ ಆಗಮಿಸಿ ಮತದಾನ ಮಾಡುತ್ತಿದ್ದಾರೆ. ಎಲ್ಲೆಡೆ ಶಾಂತಿಯುತವಾಗಿ ಮತದಾನ ಆರಂಭವಾಗಿದೆ.