ವಿಜಯಪುರ: ಅಕ್ರಮವಾಗಿ ಪ್ಲಾಸ್ಟಿಕ್ ಕಪ್ ಬಳಕೆ ಮಾಡುತ್ತಿದ್ದ ಚಹಾ ಅಂಗಡಿ ಮೇಲೆ ಮಹಾನಗರ ಪಾಲಿಕೆ ಅಧಿಕಾರಿಗಳು ದಾಳಿಗೈದಿರುವ ಘಟನೆ ವಿಜಯಪುರ ನಗರದ ಜಿಲ್ಲಾಸ್ಪತ್ರೆಯ ಬಳಿ ನಡೆದಿದೆ. ಮಹಾನಗರ ಪಾಲಿಕೆ ಆಯುಕ್ತ ಮೆಕ್ಕಳಕಿ ನೇತೃತ್ವದಲ್ಲಿ ಅಂಗಡಿಯ ಮೇಲೆ ದಾಳಿಗೈದು ಪ್ಲಾಸ್ಟಿಕ್ ಹಾಗೂ ದಂಡ ವಿಧಿಸಿದ್ದಾರೆ. ಅಲ್ಲದೇ, ಪ್ಲಾಸ್ಟಿಕ್ ಕಪ್, ಪ್ಲಾಸ್ಟಿಕ್ ಬಳಕೆ ಮಾಡದಂತೆ ಅಂಗಡಿ ಮಾಲೀಕನಿಗೆ ಎಚ್ಚರಿಕೆ ನೀಡಿದರು. ಈ ದಾಳಿ ವೇಳೆಯಲ್ಲಿ ಹೆಲ್ತ್ ಇನ್ಸ್ಪೆಕ್ಟರ್ ಸಂಜು ಅಥಣಿ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.