ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ಚುನಾವಣೆಯ ಮತ ಎಣಿಕೆಯ ಸ್ಟ್ರಾಂಗ್ ರೂಮ್ ಓಪನ್ ಮಾಡಲಾಯಿತು.
ವಿಜಯಪುರ ನಗರದ ದರ್ಬಾರ್ ಕಾಲೇಜಿನಲ್ಲಿ ಸ್ಟ್ರಾಂಗ್ ರೂಮ್ನ್ನು ಜಿಲ್ಲಾ ಚುನಾವಣಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ನೇತೃತ್ವದಲ್ಲಿ ಸ್ಟಾಂಗ್ ರೂಮ್ ಓಪನ್ ಮಾಡಲಾಗಿದ್ದು, 174 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ ಆಗಲಿದೆ. 55.17% ರಷ್ಟು ಮತದಾನ ಆಗಿದೆ. ಕಮಲ ಹಾಗೂ ಕಾಂಗ್ರೆಸ್ ಮಧ್ಯೆ ಪೈಪೋಟಿ ಇದೆ. ಅಲ್ಲದೇ, ಜಿಲ್ಲಾ ಪೊಲೀಸ ಇಲಾಖೆಯಿಂದ ಸೂಕ್ತ ಪೊಲೀಸ ಬಂದೋಬಸ್ತ್ ಕೈಗೊಳ್ಳಲಾಗಿದೆ.