ವಿಜಯಪುರ: ವಿಜಯಪುರ ಜಿಲ್ಲೆಯ ಎಲ್ಲಾ 8 ವಿಧಾನಸಭೆ ಕ್ಷೇತ್ರಗಳಲ್ಲಿ ಒಂದು ಮೀಸಲು ಹೊರತಾಗಿ ಇತರೆ ಕ್ಷೇತ್ರಗಳಲ್ಲಿ ಗಾಣಿಗ ಸಮಾಜಕ್ಕೆ ರಾಷ್ಟ್ರೀಯ ಪಕ್ಷಗಳು ಟಿಕೆಟ್ ನೀಡಬೇಕು ಎಂದು ಗಾಣಿಗರ ಸಮಾಜದ ಮುಖಂಡ ಎಂ.ಎಸ್. ಶಿರಾಡೋಣ ಹೇಳಿದರು.
ವಿಜಯಪುರ ನಗರದಲ್ಲಿ ಗುರುವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಗಾಣಿಗ ಸಮುದಾಯದ ಜನಸಂಖ್ಯೆ ಹಾಗೂ ಮತದಾರರು ಹೆಚ್ಚಿನ ಪ್ರಮಾಣದಲ್ಲಿದೆ. ರಾಷ್ಟ್ರೀಯ ಪಕ್ಷಗಳು ಸಮುದಾಯದ ನಾಯಕರಿಗೆ ಆದ್ಯತೆ ನೀಡಬೇಕು ಎಂದರು. ಈ ವೇಳೆ ಗಾಣಿಗ ಸಮಾಜದ ಜಿಲ್ಲಾ ಕಾರ್ಯಾಧ್ಯಕ್ಷ ಡಾ. ಅಶೋಕ ತರಡಿ, ಜಿಲ್ಲಾಧ್ಯಕ್ಷ
ಬಿ.ಬಿ.ಪಾಸೋಡಿ, ಸಹ ಕಾರ್ಯದರ್ಶಿ ಎಸ್.ಬಿ.ಪುಟ್ಟಿ ಇತರರು ಉಪಸ್ಥಿತರಿದ್ದರು.