ವಿಜಯಪುರ: ಕೆಲವರು ಕನಸು ಕಾಣುತ್ತಿದ್ದಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.
ವಿಜಯಪುರ ನಗರದಲ್ಲಿ ಮಾಧ್ಯಮದ ಎದುರು ಮಾತನಾಡಿದ ಅವರು, ಲೋಕಸಭಾ ಚುನಾವಣೆ ನಂತರ ಕಾಂಗ್ರೆಸ್ ಸರಕಾರ ಅಧಿಕಾರ ಕಳಿದುಕೊಳ್ಳುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು. ಅದು ಹಗಲು ಕನಸು ಕಾಣುತ್ತಿದ್ದಾರೆ. ಹಗಲು ಕನಸು ಕಾಣಲಿ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು. ಕನಸು ಕಾಣುವವರಿಗೆ ನಾವು ಬೇಡ ಅನ್ನಲು ಆಗಲ್ಲ. ಬಹಳ ಸಂತೋಷ. ಈ ರೀತಿ
ಅನೇಕ ಆಸೆಗಳನ್ನ ಇಟ್ಟು ಕೊಂಡಿರುತ್ತಾರೆ ಎಂದು ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಮೂರು ಸಿಎಂ ಇದ್ದಾರೆಂದು ವಿಪಕ್ಷನಾಯಕ ಆರ್ ಅಶೋಕ್ ಹೇಳಿಕೆಗೆ ಮಾತನಾಡಿದ ಅವರು, ವಿರೋಧ ಪಕ್ಷದವರ ಹೇಳಿಕೆಗೆ ಉತ್ತರ ಕೊಡೋಕೆ ಆಗಲ್ಲ. ವಿಪಕ್ಷದವರು ಇಲ್ಲ ಸಲ್ಲದ ಹೇಳಿಕೆ ಕೊಡ್ತಾರೆ. ಅದಕ್ಕೆಲ್ಲಾ ಉತ್ತರ ಕೊಡೋಕೆ ಆಗಲ್ಲ.
ರಾಜ್ಯದಲ್ಲಿ ಭೀಕರ ಬರಗಾಲವಿದೆ. ಕೇಂದ್ರ ಸರ್ಕಾರ ಒಂದು ಬಿಡಿಗಾಸು ಬಿಡುಗಡೆ ಮಾಡಿಲ್ಲ ಎಂದು ಬಿಜೆಪಿಗರ ವಿರುದ್ಧ ವಾಗ್ದಾಳಿ ನಡೆಸಿದರು. ಮೊದಲು ಹಣ ಬಿಡುಗಡೆ ಮಾಡೋಕೆ ಅವ್ರಿಗೆ ಹೇಳಿ, ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಏನೆಲ್ಲಾ ಹಣ ಕೊಡಬೇಕು. ಅದು ನಮ್ಮ ಹಕ್ಕು, ಎನ್ ಡಿಆರ್ ಎಫ್ ನಿಯಮದಂತೆ 17ಸಾವಿರ ಕೋಟಿ ನಷ್ಟದ ಮನವಿ ಕೊಟ್ಟಿದ್ದೇವೆ. ಬರಗಾಲಕ್ಕಾಗಿ ಒಂದು ಬಿಡಿಗಾಸು ಹಣ ಬಿಡುಗಡೆ ಮಾಡಿಲ್ಲ. ಅದನ್ನೆ ಕೇಳೋಕೆ ಹೇಳಿ ಅವರಿಗೆ ಮೊದಲು ಎಂದರು.