ವಿಜಯಪುರ: ರಾಷ್ಟ್ರೀಯ ಮತ್ಸ್ಯ ಕೃಷಿಕರ ದಿನಾಚರಣೆ ಅಂಗವಾಗಿ ಜುಲೈ 10ರಂದು ಭೂತನಾಳ ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದಲ್ಲಿ ಮಿಶ್ರ ಮೀನು ಸಾಕಾಣಿಕೆ ಒಂದು ದಿನದ ತರಬೇತಿ ಹಾಗೂ ಮೀನು ಮರಿಗಳ ಮಾರಾಟ ಹಮ್ಮಿಕೊಳ್ಳಲಾಗಿದೆ. ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸುವ ರೈತರಿಗೆ ಪ್ರಮಾಣ ಪತ್ರವನ್ನು ನೀಡಲಾಗುವುದು. ಭಾಗವಹಿಸಲಿಚ್ಚಿಸುವವರು ಭಾವಚಿತ್ರ ಹಾಗೂ ಆಧಾರ ಕಾರ್ಡ್ ಪ್ರತಿಯೊಂದಿಗೆ ತರಬೇತಿಯಲ್ಲಿ ಭಾಗವಹಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೊ: 9480518679, 08352-264516, ಅಥವಾ 9945959704 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ. ಈ ತರಬೇತಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಭೂತನಾಳ ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.