ವಿಜಯಪುರ: ಕಾರು ಚಾಲಕ ಸಾವಿನ ಬಗ್ಗೆ ಸಚಿವ ಮುರುಘೇಶ ನಿರಾಣಿ ಹೇಳಿಕೆ ಹಿನ್ನೆಲೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಿಎಂಗೆ ಪತ್ರ ಬರೆದಿದ್ದಾರೆ. ಸಚಿವ ನಿರಾಣಿ ಹೇಳಿಕೆ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿಗೆ ಶಾಸಕ ಯತ್ನಾಳ ಪತ್ರ ಬರೆದಿದ್ದು, ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕು.
ಸಂಪುಟದ ಸದಸ್ಯರು ಈ ರೀತಿ ಆರೋಪ ಮಾಡಿರುವ ಬಗ್ಗೆ ಸತ್ಯಾಸತ್ಯತೆ ತಿಳಿಯಲಿ. ಇನ್ನೂ
ಇಂತಹ ಆರೋಪದಿಂದ ಸರಕಾರದ ಬಗ್ಗೆ ತಪ್ಪು ಸಂದೇಶ ಬರುತ್ತದೆ. ದೇಶದ ಜನತೆಗೆ ಇದರ ಬಗ್ಗೆ ಸತ್ಯಾಸತ್ಯತೇ ಗೊತ್ತಾಗಬೇಕಿದೆ. 24 ಗಂಟೆಯ ಒಳಗಾಗಿ ಸಿಬಿಐ ತನಿಖೆಗೆ ಶಿಫಾರಸು ಮಾಡಬೇಕು. ಅಲ್ಲದೇ, ಸುಳ್ಳು ಆರೋಪ ಮಾಡಿದ ಸಚಿವರನ್ನು ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ.